ಬೆಂಗಳೂರು:- ‘ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಬೇರೆ ಪಕ್ಷಗಳಲ್ಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಈ ದೇಶವನ್ನು ಆಳುವ ನಾಯಕತ್ವ ಬಿಜೆಪಿ ಬಿಟ್ಟು ಇತರ ಪಕ್ಷಗಳಲ್ಲಿಲ್ಲ ಎನ್ನುವುದನ್ನು ಫಲಿತಾಂಶ ಸ್ಪಷ್ಟಪಡಿಸಿದೆ. ಮೋದಿ ನಾಯಕತ್ವಕ್ಕೆ ಜನರು ಜೈ ಅಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಗೆದ್ದು ಮೋದಿ ಅವರಿಗೆ ಉಡುಗೊರೆಯಾಗಿ ನೀಡುತ್ತೇವೆ ಎಂದರು.
ಈ ಅಧಿವೇಶನ ಮುಗಿದ ನಂತರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುತ್ತೇವೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲ ಕಡೆಗಳಲ್ಲೂ ಬಹಳ ದೊಡ್ಡ ಸ್ವಾಗತ ಸಿಕ್ಕಿದೆ. ಜನರಲ್ಲಿ ವಿಶ್ವಾಸ ಮೂಡಿದೆ. ಅದರ ಲಾಭವನ್ನು ಪಡೆದು ಪಕ್ಷವನ್ನು ಬಲಪಡಿಸಲಿದ್ದೇವೆ. ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಎಸ್ಸಿ, ಎಸ್ಟಿ, ಒಬಿಸಿಯನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.