ಮೈಸೂರು:- ಬಿ.ವೈ. ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿದ್ದು ಒಳ್ಳೆಯ ಬೆಳವಣಿಗೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಕ್ಷೇತ್ರದಲ್ಲೂ ಯುವಕರಿಗೆ ಮಣೆ ಹಾಕಲಾಗುತ್ತಿದೆ.
ವಿಜಯೇಂದ್ರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದವರು’ ಎಂದರು. ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ಅನುಭವ- ಮಾರ್ಗದರ್ಶನ ವಿಜಯೇಂದ್ರ ಅವರಿಗೆ ಸಿಗುವುದರಿಂದ ಸಂಘಟನೆಯಲ್ಲಿ ಯಶಸ್ವಿಯಾಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲೇ ನಾವೆಲ್ಲರೂ ಗೆದ್ದು ಬಂದಿದ್ದೇವೆ. ಮುಂದಿನ ಚುನಾವಣೆಯಲ್ಲೂ ಅವರ ಹೆಸರಿನಲ್ಲೇ ಗೆಲ್ಲಲಿದ್ದೇವೆ. ಬಿಜೆಪಿ ಬಹುಮತ ಗಳಿಸಲಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದರು.