ಬೆಂಗಳೂರು: ಚಳಿಗಾಲಸದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಆರೋಗ್ಯ ಸೇವೆ: ನೂತನ 262 ಅಂಬುಲೆನ್ಸ್ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ವರದಿ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಎಲ್ಲರಿಗೂ ಕಾಣುತ್ತಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಕಬ್ಬಿನ ಬೆಳೆಗಾರರ ಕೂಗಿಗೆ ಈ ಸರ್ಕಾರ ಕಿವಿ ಕೊಡ್ತಿಲ್ಲ, ಅದೇ ರೀತಿ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಮರೆತಿದೆ. ಶಾಸಕರಿಗೆ ಬಿಡುಗಡೆ ಆಗಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ, ಇಲ್ಲಿಯತನಕ ಒಂದು ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೇಲ್ನೋಟಕ್ಕೆ ಇದು ರೈತ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂದು ಗೊತ್ತಾಗುತ್ತಿದೆ ಎಂದರು.