ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಜರುಗಿದೆ.
IPL 2024: ವಿಲ್ ಜ್ಯಾಕ್ಸ್ ಸಿಡಿಲಬ್ಬರದ ಶತಕ; RCB ಗೆ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ!
ಲಾರಿಯಲ್ಲಿದ್ದ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಭಾಗ್ಯಮ್ಮ(44) ಮಾರೆಮ್ಮ(45) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಇನ್ನೂ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನ ಬಳ್ಳಾರಿಯ ಟ್ರಾಮಾಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದೆ. ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.