6ನೇ ತಾರೀಖಿನಿಂದ ಜಾರಿಯಾಗುವಂತೆ ಕರ್ನಾಟಕ ರಾಜ್ಯಾದ್ಯಂತ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ವೀಕೆಂಡ್ ಕರ್ಫ್ಯೂ ವೇಳೆ, ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
