ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಇಂದು ರಾತ್ರಿ 9 ಗಂಟೆಯಿಂದ ಸೋಮವಾರದ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವರು ಮಾಹಿತಿ ನೀಡಿದ್ದಾರೆ. ಕಳೆದ ವಾರದ ವೀಕೆಂಡ್ ಸಂದರ್ಭದಲ್ಲಿ ಮದ್ಯದಂಗಡಿಗಳಲ್ಲಿ ಎಣ್ಣೆ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶಿಸಿತ್ತು. ಇದರಿಂದಾಗಿ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ ಉಂಟಾಗಲಿದೆ. ಬಾರ್ ಬಂದ್ ಮಾಡೋದು ಬೇಡ ಅಂತ ಅಬಕಾರಿ ಸಚಿವರು ಸಿಎಂಗೆ ಸಲಹೆ ಮಾಡಿದ್ದರೂ,
ಆದರೆ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಕನಿಷ್ಠ ಈ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಆದ್ರೂ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿ ಮದ್ಯಪ್ರಿಯರಿದ್ದರು. ಆದ್ರೇ ಸ್ವತಹ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆಯವರೆಗೆ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸ ಲಾಗಿದೆ. ಬಾರ್ ಗಳು ಬಂದ್ ಆಗಿರಲಿವೆ ಎಂದು ಹೇಳಿದ್ದಾರೆ. ಈ ಮೂಲಕ ವೀಕೆಂಡ್ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದಂತಾಗಿದೆ.
