ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷ 2025ಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ. ಯುವ ಸಮೂಹ 2024ಕ್ಕೆ ವಿದಾಯ ಹೇಳಿ, 2025ನ್ನು ಸ್ವಾಗತಿಸಿದೆ.
ಬೆಂಗಳೂರು ಸೇರಿ ಕರ್ನಾಟಕದ ಪ್ರಮುಖ ನಗರಗಳಲ್ಲಿ 2024ಕ್ಕೆ ಬೈ ಬೈ ಹೇಳಿದ್ದು, ಹೊಸ ವರ್ಷ 2025ಕ್ಕೆ ಹಾಯ್ ಹಾಯ್ ಎಂದು ಹೇಳುವ ಮೂಲಕ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ಕೋರಿದ ಯುವ ಸಮೂಹ ಕುಣಿದು ಕುಪ್ಪಳಿಸಿದ್ದಾರೆ.
ಈ ಕ್ಷಣಕ್ಕಾಗಿ ಎದುರು ನೋಡುತ್ತಿದ್ದ ಬೆಂಗಳೂರು ಮಂದಿಯ ಸಂತಸ ಮುಗಿಲು ಮುಟ್ಟಿತ್ತು. ಕರ್ನಾಟಕ ಜನತೆ 2025ನ್ನು ಕುಣಿದು ಕುಪ್ಪಳಿಸಿ ಚಿಯರ್ಸ್ ಹೇಳಿ ಸ್ವಾಗತಿಸಿದ್ದಾರೆ. ಇಡೀ ರಾಜ್ಯಾದ್ಯಂತ ನ್ಯೂ ಇಯರ್ ಸೆಲಬ್ರೇಷನ್ ಮಾಡಿದೆ., ರಂಗು ರಂಗಿನ ಬೆಳಕಿನ ಮೂಲಕ ಬರಮಾಡಿಕೊಳ್ಳಲಾಗಿದೆ.
. M.G.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹೊಸ ವರ್ಷಾಚರಣೆ ಜೋರಾಗಿದ್ದು, ಕೇಕ್ ಕತ್ತರಿಸಿ, ಪರಸ್ಪರ ಶುಭಾಶಯ ಕೋರಿದ್ದಾರೆ. ಯುವಕ ಯುವತಿಯರು ಮಧ್ಯರಾತ್ರಿ ಕುಣಿದು ಕುಪ್ಪಳಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯರಾತ್ರಿ ಯುವಕ, ಯುವತಿಯರು ರಸ್ತೆಗಳಲ್ಲಿ ಕುಣಿದು ಕುಪ್ಪಳಿಸಿದರು. ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿದರು. ಹೊಸ ವರ್ಷದ ಸೆಂಟರ್ ಆಫ್ ಅಟ್ರ್ಯಾಕ್ಷನ್ ಕೇಂದ್ರಗಳಾದ ಬೆಂಗಳೂರಿನ ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲ ವರ್ಣರಂಜಿತವಾಗಿ ಮಿರಿ ಮಿರಿ ಮಿಂಚುತ್ತಿದ್ದವು.
ಬಾರ್, ಪಬ್ಗಳು ವಿಶೇಷ ಆಫರ್ ನೀಡಿದ್ದವು. ಪರಿಣಾಮ ಪಾನ ಪ್ರಿಯರು ರಾತ್ರಿಯಿಂದಲೇ ಪಾರ್ಟಿ ಮಾಡುತ್ತಾ ಡಿಜೆ ಹಾಡಿಗೆ ನೃತ್ಯ ಮಾಡುತ್ತಿದ್ದರು. ಇದರಿಂದ ಭರ್ಜರಿ ವ್ಯಾಪಾರವೂ ನಡೆಯಿತು. ಜಿಲ್ಲಾ ಕೇಂದ್ರ ಸ್ಥಳಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.
ಬೇಕರಿಗಳಲ್ಲಿ ಹೊಸ ವರ್ಷದ ಕೇಕ್ಗಳಿಗೆ ಭಾರೀ ಬೇಡಿಕೆ ಇತ್ತು. ಬಡಾವಣೆಯ ಜನರು ರಾತ್ರಿ 12 ಗಂಟೆ ಆಗುತ್ತಿದ್ದಂತೆ ರಸ್ತೆಯಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರ ಮಾಡಿಕೊಂಡರು.