ಶ್ರೀಲಂಕಾ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿಯ ನಿಮಿತ್ತ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಚುಟುಕು ಕ್ರಿಕೆಟ್ನಿಂದ ವಿಶ್ರಾಂತಿ ಪಡೆಯುತ್ತಿದ್ದೇನೆಂಬ ಭಾವನೆ ನನಗೆ ಉಂಟಾಗುತ್ತಿದೆ ಎಂದಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದರು.
ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ, ರೋಹಿತ್!
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯ ನಿಮಿತ್ತ ಮಾತನಾಡಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಪಡೆದಿದ್ದೇನೆಂದು ಈಗಳು ಅನಿಸುತ್ತಿಲ್ಲ ಎಂದು ಹೇಳಿದ್ದಾರೆ. ಟಿ20 ದೊಡ್ಡ ಟೂರ್ನಿಯ ನಿಮಿತ್ತ ನಾವು ವಿಶ್ರಾಂತಿ ಪಡೆಯುತ್ತಿದ್ದೇವೆಂದು ಅನಿಸುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ವಿಶ್ರಾಂತಿ ಪಡೆದಂತೆ ಈಗಲೂ ಟಿ20ಐ ಕ್ರಿಕೆಟ್ನಿಂದ ವಿಶ್ರಾಂತಿ ಪಡೆಯುತ್ತಿದ್ದೇನೆಂದು ನನಗೆ ಅನಿಸುತ್ತಿದೆ. ನಮಗೆ ದೊಡ್ಡ ಟೂರ್ನಿ ಬರುತ್ತಿದೆ. ಹಾಗಾಗಿ ನಾವು ತಯಾರಿ ನಡೆಸುತ್ತಿದ್ದೇವೆಂಬ ಭಾವನೆ ನನಗೆ ಮೂಡುತ್ತಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಿಂದ ಸಂಪೂರ್ಣವಾಗಿ ಹೊರ ಬಂದಿದ್ದೇನೆಂಬ ಭಾವನೆ ನನಗೆ ಮೂಡಿತ್ತಿಲ್ಲ,” ಎಂದು ರೋಹಿತ್ ಶರ್ಮಾ ಹೇಳೀದ್ದಾರೆ.