ಚಳಿಗಾಲದಲ್ಲಿ ಪಿಸ್ತಾ ತಿನ್ನುವುದರಿಂದ ಬಹಳ ಉಪಯೋಗವಾಗುತ್ತದೆ ಎಂದು ವೈದ್ಯರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪಿಸ್ತಾವನ್ನು ದಿನನಿತ್ಯ ಸೇವಿಸುವುದರಿಂದ ದೇಹಕ್ಕೆ ಉಂಟಾಗುವ ಹಲವು ಕಾಯಿಲೆಗಳನ್ನು ತಡೆಗಟ್ಟಬಹುದು. ಪಿಸ್ತಾದಲ್ಲಿ ಹಲವು ಅಂಶಗಳನ್ನು ಒಳಗೊಂಡಿದೆ. ಉದಾಹರಣೆಗೆ ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು, ಬಹು ಅಪರ್ಯಾಪ್ತ ಕೊಬ್ಬಿನಾಮ್ಲಗಳು, ಲಿನೋಲಿಕ್ ಆಮ್ಲ, ಪ್ರೋಟೀನ್, ವಿಟಮಿನ್ಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ಗಳ ಗುಣಗಳನ್ನೊಳಗೊಂಡಿದೆ.
ಪಿಸ್ತಾ ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳು ಸಿಗುತ್ತವೆ. ಹಾಗೂ ಮುಖ್ಯವಾಗಿ ಚಳಿಗಾಲದಲ್ಲಿ ಪಿಸ್ತಾ ತಿನ್ನುವುದರಿಂದ ಹಲವು ರೋಗಗಳಿಂದ ದೂರ ಉಳಿಯಬಹುದು.
ರಕ್ತದ ಕೊರತೆ ನೀಗಿಸುತ್ತದೆ
ಪಿಸ್ತಾದಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದ್ದು, ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಹಾಗೂ ಹಿಮೋಗ್ಲೋಬಿನ್ ಮಟ್ಟವನ್ನು ಕೂಡ ಉತ್ತಮ ಮಾಡುತ್ತದೆ.
ಮಧುಮೇಹ ರೋಗಿಗಳಿಗೆ ಉತ್ತಮ :
ಪಿಸ್ತಾ ಸೇವನೆಯು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ.ಪಿಸ್ತಾದಲ್ಲಿರುವ ಅನೇಕ ಅಂಶಗಳು ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.