ಖ್ಯಾತ ನಟಿ ರಶ್ಮಿಕಾ ಮಂದಣ್ಣ ಡೀಪ್ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ (Rakshit Shetty) ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರ ಜೊತೆ ಮಾತನಾಡಿರುವ ಅವರು, ‘ಯಾವ ನಟಿಯದ್ದೂ ಹಾಗೆ ಆಗಬಾರದು. ಇಂತಹ ಪ್ರಕರಣಗಳಿಗೆ ಸರಕಾರ ಬೇಗ ಸ್ಪಂದಿಸಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ವಿಡಿಯೋ ವೈರಲ್ ಆಗುವ ಮುಂಚೆಯೇ ಕ್ರಮಕ್ಕೆ ಮುಂದಾಗಬೇಕು ಎಂದು ರಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ.
ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್ಫೇಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಇವರ ಇಂಥದ್ದೇ ವಿಡಿಯೋ ಶೇರ್ ಆಗಿ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಡಿಯೋ ಕುರಿತು ದೂರು ದಾಖಲಾಗಿದ್ದರೂ, ದುರುಳರು ಅಂಜದೇ ಮತ್ತೊಂದು ಡೀಪ್ಫೇಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)