ರಾಮನಗರ: ನಿಖಿಲ್, ವಿಜಯೇಂದ್ರ ಇಬ್ಬರೂ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗ್ತಾರೆ. ಉತ್ತಮ ಬಾಂಧವ್ಯದೊಂದಿಗೆ ಚುನಾವಣೆಯಲ್ಲಿ ತೊಡಗಿಸಿಕೊಳ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಜಯೇಂದ್ರ ಭೇಟಿ ಕುರಿತು ಮಾತನಾಡಿದ ಹೆಚ್ಡಿಕೆ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡ್ತಾರೆ ಎಂದು ಹೇಳಿದರು.