ಬೆಂಗಳೂರು : ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ ಎಂದು ಬೇಸರಿಸಿದ್ದಾರೆ.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ. ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದು ಸುಮಲತಾ ಆಗ್ರಹಿಸದ್ದಾರೆ.