ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.
Budget 2024: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ ಈ ಬಜೆಟ್ ಎಂದು ನಿರ್ಮಲಾ ಹೇಳಿದರು.
ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.
ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.