ರಾಯಚೂರು: ವಿಜಯಪುರದಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಎಲ್ಲರೂ ತಲೆತಗ್ಗಿಸುವಂತ ಅಮಾನವೀಯ ಘಟನೆ ಇದೆ. ಲೇಬರ್ , ಪೊಲೀಸ್ ಕೇಸ್ ಎಲ್ಲಾ ಸೆಕೆಂಡರಿ. ಈ ತರ ಮನಸ್ಥಿತಿ ಇರುವಂತದ್ದು , ನಮ್ಮ ರಾಜ್ಯದಲ್ಲಿ ನಡೆದಿದೆ ಅಂದರೆ ನನಗೆ ವೈಯುಕ್ತಿಕವಾಗಿ ತಲೆತಗ್ಗಿಸುವಂತದ್ದು. ಕಾರ್ಮಿಕರನ್ನ ಹಿಗ್ಗಾಮುಗ್ಗಾ ಹೊಡೆದಿರುವುದನ್ನು ನಾನು ಮಾಧ್ಯಮಗಳ ಮುಖಾಂತರ ನೋಡಿದ್ದೇನೆ. ಎಲ್ಲಾ ಇಲಾಖೆ ಅಧಿಕಾರಿಗಳು ಅಲ್ಲಿಗೆ ಹೋಗಿರ್ತಾರೆ ಕಾನೂನಿನ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನಿನ ಕಠಿಣ ಕ್ರಮ ಪರಿಹಾರ ಅಲ್ಲಾ ಮನಸ್ಥಿತಿಗಳು ಬದಲಾಗಬೇಕು ಎಂದರು.
ಕಾರ್ಮಿಕರ ಕೈಕಾಲು ಕಟ್ಟಿ ಹಲ್ಲೆ ; ಸ್ವಯಂ ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಇನ್ನೂ, ಬೆಳಗಾವಿಯಲ್ಲಿ ಡಿಸಿಎಂ ಡಿಕೆಶಿ, ತ್ಯಾಗದ ಬಗ್ಗೆ ಮಾತನಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಹೇಳಿದ್ದು ಅವರನ್ನೇ ಕೇಳ್ರಿ, ನನ್ನ ಕೇಳಿದ್ರೆ ಹೇಗ್ರಿ..? , ನಾನೇಂಗೆ ಹೇಳಲಿ, ಅವರಿಗೆ ಈ ಪ್ರಶ್ನೆ ಕೇಳಿ..? ಎಂದರು.