ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ನೀಡಲಾಗಿದ್ದು ಉಚಿತ ಬಸ್ ಪ್ರಯಾಣ ಇದೀಗ ಸ್ಥಗಿತಗೊಳಿಸುವ ಬಗ್ಗೆ ಮಾತುಗಳು ಕೇಳಿ ಬರ್ತಿದೆ. ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಸರ್ಕಾರದ ಹಂತದಲ್ಲಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವುದು ಸರ್ಕಾರದ ಹಂತದಲ್ಲಿ ಇಲ್ಲ. ಶಕ್ತಿ ಯೋಜನೆ ಪರಿಷ್ಕರಿಸುವ ಉದ್ದೇಶ ಹಾಗೂ ಪ್ರಸ್ತಾವನೆ ಇಲ್ಲ. ಕೆಲ ಮಹಿಳೆಯರು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಆ ಕಾರ್ಯಕ್ರಮದಲ್ಲಿ ನಾನು ಅಲ್ಲಿ ಇರಲಿಲ್ಲ ಎಂದು ಸಿಎಂ ಹೇಳಿದ್ದಾರೆ.
ಇನ್ನು ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವೀಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಶೀಘ್ರದಲ್ಲಿ ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.c