ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಸು ಮಾಲೀಕನ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಂಕ್ರಾಂತಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದ್ದು, ಬಿಜೆಪಿ ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ ಆಚರಿಸಲು ನಿರ್ಧರಿಸಿವೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದೆ. ಒಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದರೆ ಮತ್ತೊಂದೆಡೆ ಬಿಜೆಪಿ ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ ಆಚರಿಸಲು ನಿರ್ಧರಿಸಿವೆ.
ಘಟನೆಯನ್ನು ಖಂಡಿಸಿ ನಾಳೆ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಚಾಮರಾಜಪೇಟೆಯ ಮೈಸೂರು ಬ್ಯಾಂಕ್ ಸರ್ಕಲ್, ಚಾಮರಾಜಪೇಟೆ ಅಂಗಡಿ ಬೀದಿ, ಸಿದ್ದಾಶ್ರಮ ಟ್ರಸ್ಟ್ ಈ ಮೂರು ಸ್ಥಳಗಳಲ್ಲಿ ಪೋಲಿಸ್ ಇಲಾಖೆ ಅನುಮತಿ ಕೊಟ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಯಲಿದೆ. ಜೊತೆಗೆ ಹಿಂದೂ ಜಾಗರಣಾ ವೇದಿಕೆಯಿಂದ ರಾಜ್ಯಾದ್ಯಂತ ಭಾನುವಾರದವರೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ.