ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಎರಡು ದಿನಗಳಿಂದ ಗ್ರಾಮ್ಗೆ 65 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಇದೀಗ ಗ್ರಾಮ್ಗೆ 40 ರೂ ಮೇಲೆ ಜಿಗಿದಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 20 ಪೈಸೆಯಷ್ಟು ಹೆಚ್ಚಾಗಿದೆ.
ವಿದೇಶ ಮಾರುಕಟ್ಟೆಗಳ ಪೈಕಿ ಯುಎಇಯಲ್ಲಿ ಮಾತ್ರವೇ ತುಸು ಕಡಿಮೆ ಆಗಿದೆ. ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 21ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,700 ರೂ
- ಚೆನ್ನೈ: 58,100 ರೂ
- ಮುಂಬೈ: 57,700 ರೂ
- ದೆಹಲಿ: 57,850 ರೂ
- ಕೋಲ್ಕತಾ: 57,700 ರೂ
- ಕೇರಳ: 57,700 ರೂ
- ಅಹ್ಮದಾಬಾದ್: 57,850 ರೂ
- ಜೈಪುರ್: 57,950 ರೂ
- ಲಕ್ನೋ: 57,950 ರೂ
- ಭುವನೇಶ್ವರ್: 57,700 ರೂ