ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿ ಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ.
ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಮುಂಬೈ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿದೆ, ಪ್ರತಿ ಲೀಟರ್ಗೆ 104.21 ರೂಪಾಯಿಗೆ ತಲುಪಿದೆ, ಆದರೆ ಡೀಸೆಲ್ ಬೆಲೆ ಲೀಟರ್ಗೆ 92.15 ರೂಪಾಯಿಯಾಗಿದೆ.ಬೆಂಗಳೂರಿನಲ್ಲಿ ಪೆಟ್ರೋಲ್ 99.84 ರೂ. ಡೀಸೆಲ್ 85.93 ರೂ. ಇದೆ.
ಇಂದು ದೆಹಲಿ ಡೀಸೆಲ್ ಬೆಲೆ ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ಗೆ 87.62 ರೂ. ಪೆಟ್ರೋಲ್ ಬೆಲೆ 94.72 ರೂ. ಇದೆ.
ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗ ಆಂಧ್ರಪ್ರದೇಶದಲ್ಲಿ ಪೆಟ್ರೋಲ್ ಬೆಲೆ 58 ಪೈಸೆ ಇಳಿಕೆಯಾಗಿ 108.98 ರೂ.ಗೆ ಮತ್ತು ಡೀಸೆಲ್ ಬೆಲೆ ಲೀಟರ್ಗೆ 53 ಪೈಸೆ ಇಳಿಕೆಯಾಗಿ 96.87 ರೂ.ಗೆ ತಲುಪಿದೆ. ಇದಲ್ಲದೇ ಇಂದು ಗೋವಾ, ಗುಜರಾತ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಒಡಿಶಾ, ಪುದುಚೇರಿ ಮತ್ತು ಯುಪಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್ಗೆ 43 ಪೈಸೆ ಏರಿಕೆಯಾಗಿ 107.60 ರೂ.ಗೆ ಮತ್ತು ಡೀಸೆಲ್ (ಬಿಹಾರದಲ್ಲಿ ಡೀಸೆಲ್ ಬೆಲೆ) ಲೀಟರ್ಗೆ 40 ಪೈಸೆ ಏರಿಕೆಯಾಗಿ 94.29 ರೂ.ಗೆ ತಲುಪಿದೆ.
ಇದಲ್ಲದೆ, ಅಸ್ಸಾಂ, ಛತ್ತೀಸ್ಗಢ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಮಣಿಪುರ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು SMS ಮೂಲಕ ತಿಳಿಯಿರಿ.