ಬೆಂಗಳೂರು:- ಹೆಚ್ ಡಿಕೆಗೂ, ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ ಎಂದು DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ?. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಹೀಗೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತನೆಯೇ ಇಲ್ಲ. ಪಾಪ ಅವರಿಗೆ ಅವರ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರ ಬಳಿ ಕೇಳಿ ತಿಳಿದುಕೊಳ್ಳಬೇಕು” ಎಂದು ತಿರುಗೇಟು ನೀಡಿದ್ದಾರೆ.