ಹುಬ್ಬಳ್ಳಿಭಾರತೀಯ ಜನತಾ ಪಕ್ಷದಲ್ಲಿ ಮುಖ್ಯಮಂತ್ರಿ ಆಗಿದ್ದ ಬಿ.‌ಎಸ್ ಯಡಿಯೂರಪ್ಪ ಅವರನ್ನ ಯಾಕೆ ಕೆಳಗೆ ಇಳಿಸಿದರು ಗೊತ್ತಾ? ಅಲ್ಲಿಯೂ ಅಪ್ಪನ ಆಡಳಿತದಲ್ಲಿ ಮಗ ವಿಜೇಯೇಂದ್ರ ಹಸ್ತಕ್ಷೇಪ ಇತ್ತು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಬಿಜೆಪಿಯವರು ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುವ ಕುರಿತು ಮಾತನಾಡುತ್ತಾರೆ. ಭ್ರಷ್ಟಾಚಾರ ಮುಕ್ತ ಅಭಿಯಾನ ಆರಂಭಕ್ಕೆ ಮುಂದಾಗಿದ್ದಾರೆ. ಬಿಜೆಪಿಯವರು ಯಾವ ನೈತಿಕತೆಯಿಂದ ಈ ಅಭಿಯಾನ ಮಾಡುತ್ತಾರೆ? ಈ ಹಿಂದೆ ಬಿ. ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿಜಯೇಂದ್ರ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದರು.

ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

ಹೀಗಾಗಿ ಯಡಿಯೂರಪ್ಪ ಅವರನ್ನು ಕೆಳಗೆ ಇಳಿಸಿದರು’ ಎಂದು ಸಂತೋಷ್ ಲಾಡ್ ಆರೋಪಿಸಿದ್ದಾರೆ. ಇನ್ನು ಬರ ಕಾಮಗಾರಿ ಕುರಿತು ಕೇಂದ್ರ ಸರ್ಕಾರ ಯಾವುದೇ ರೀತಿಯ ಅನುದಾನ ಕೊಡುತ್ತಿಲ್ಲ. ಕೇಂದ್ರದ ಸಚಿವರನ್ನ ಭೇಟಿ ಮಾಡಲು ಸಹ ಅನುಮತಿ ಸಿಗುತ್ತಿಲ್ಲ ಎಂದರು.

Share.