ಬೆಂಗಳೂರು:- ಕಾಂಗ್ರೆಸ್ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಿದೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಈ ಸಂಬಂಧ X ಮಾಡಿರುವ ಅವರು,ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಅಭಿವೃದ್ಧಿ ಕೇಳಬೇಡಿ.. ತೊಗೊಳ್ರಪ್ಪ ಕೊಟ್ರು ಚೊಂಬು.. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.