ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ಬಣ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣಗಳ ಮಹಾಯುತಿ ಮೈತ್ರಿಕೂಟ ಬಂಪರ್ ಬಹುಮತ ಪಡೆದಿವೆ. ಭರ್ಜರಿ ಗೆಲುವಿನೊಂದಿಗೆ ನೂತನ ಸರ್ಕಾರ ರಚನೆಗೆ ಕಸರತ್ತು ಜೋರಾಗಿದೆ. ಬಿಜೆಪಿ 132 ಸ್ಥಾನಗಳನ್ನು ಗೆದ್ದಿದ್ದು ಶಿವಸೇನೆ 54 ಸ್ಥಾನಗಳನ್ನು ಗೆದ್ರೆ ಅಜಿತ್ ಪವಾರ್ ಎನ್ಸಿಪಿ 43 ಸ್ಥಾನಗಳನ್ನು ಗೆದ್ದು ಬೀಗಿದೆ. ಸದ್ಯ ಶಾಸಕಾಂಗ ಪಕ್ಷದ ನಾಯಕನ ರಚನೆ ಕಸರತ್ತು ನಡೆಯುತ್ತಿದ್ದು ಸಿಎಂ ಯಾರು ಅನ್ನೋದು ಫೈನಲ್ ಆಗಬೇಕಿದೆ.
ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಜನಪ್ರಿಯತೆಗಾಗಿ ಯಾವ ಕೆಲಸವನ್ನೂ ಮಾಡಲಿಲ್ಲ. ಜನರಿಗಾಗಿ ನಮ್ಮ ಸರ್ಕಾರ ಮಾಡಿದ ಕೆಲಸವೇ ನಮಗೆ ಜನಪ್ರಿಯತೆಯನ್ನು ತಂದುಕೊಟ್ಟಿತು.
Pregnancy Age: ಮಗು ಪಡೆಯಲು ಸೂಕ್ತವಾದ ವಯಸ್ಸು ಯಾವುದು.? ಮಹಿಳೆಯರು-ಪುರುಷರಿಗೆ ವೈದ್ಯರು ನೀಡೋ ಸಲಹೆ ಏನು.?
ನಾನು ಮತ್ತು ನಮ್ಮ ಸರ್ಕಾರದ ಉಪಮುಖ್ಯಮಂತ್ರಿಗಳು ದಿನದ 24 ಗಂಟೆಯೂ ಕೆಲಸ ಮಾಡಿದ್ದೇವೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ನಿರ್ಧಾರವನ್ನು ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಿಟ್ಟಿದ್ದೇವೆ. ಅವರು ಯಾವ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.
ನಾನೆಂದೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸು ಕಂಡಿರಲಿಲ್ಲ. ಕಳೆದ ಎರಡೂವರೆ ವರ್ಷಗಳಲ್ಲಿ ನಾನು ಜನಸಾಮಾನ್ಯನಂತೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಯತ್ನಿಸಿದ್ದೇನೆ. ನನಗೆ ಆ ಬಗ್ಗೆ ಆತ್ಮತೃಪ್ತಿಯಿದೆ. ಈ ಬಾರಿಯ ಗೆಲುವು ಜನರ ಗೆಲುವು. ನಮ್ಮ ಸರ್ಕಾರಕ್ಕೆ ನೀಡಿದ ಸಹಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ಅವರ ಮಾರ್ಗದರ್ಶನದಲ್ಲಿ ಈ ಬಾರಿ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಕಾಣಲು ಸಾಧ್ಯವಾಯಿತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.