ತುಮಕೂರು : ತುಮಕೂರಿನಲ್ಲಿ ಮುಂದುವರಿದ ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ತುಮಕೂರಿನ ಟೂಡಾ ಕಚೇರಿ ಬಳಿ ಈ ಅವಘಡ ಸಂಭವಿಸಿದ್ದು, ಹಾಲು ತರಲು ಬಂದಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ತುಮಕೂರಿನ ಸತ್ಯಮಂಗದಲ್ಲಿರುವ ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ಟಿ.ತಿಪ್ಪೇಸ್ವಾಮಿ ಮೃತರಾಗಿದ್ದಾರೆ. ಇಂದು ಬೆಳಗ್ಗೆ ಮನೆಗೆ ಹಾಲು ತರಲು ಮನೆಯಿಂದ ಹೊರಗೆ ಬಂದಿದ್ದರು. ಈ ವೇಳೆ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಬೈಕ್ ಡಿಕ್ಕಿ ಹೊಡೆದಿದ್ದು, ತಿಪ್ಪೇಸ್ವಾಮಿ ಅವರ ತಲೆಗೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಿಪ್ಪೇಸ್ವಾಮಿ ಸಾವನ್ನಪ್ಪಿದ್ದಾರೆ.
ಮೇಲಾಧಿಕಾರಿಯಿಂದ ಕಿರುಕುಳ ಆರೋಪ: ನೇಣು ಬಿಗಿದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಇನ್ನೂ ಘಟನೆ ಸಂಬಂಧ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.