ಮಂಡ್ಯ: ರೈತನಿಗೆ ನೋವಾದಾಗ ಹೃದಯ ಮರುಗುತ್ತೆ ಅಂತವರಿಗೆ ಕಣ್ಣೀರು ಬರುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ಮಂಡ್ಯದ ಚಿನಕುರುಳಿ ಗ್ರಾಮದಲ್ಲಿ ಮಾತನಾಡಿದ ದೇವೇಗೌಡರು, ನಿಖಿಲ್ ಕುಮಾರಸ್ವಾಮಿ ಅವರ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರು ಮಾತಾಡ್ತಾರೆ.
ಜವಹಾರ್ಲಾಲ್ ನೆಹರು, ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಯಾವತ್ತಾದ್ರೂ ಜನರಿಗಾಗಿ ಕಣ್ಣೀರು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ದೇಶಕ್ಕೆ ಅನ್ನಕೊಡುವ ರೈತನಿಗೆ ನೋವಾದಾಗ ಹೃದಯ ಮರುಗುತ್ತೆ ಅಂತವರಿಗೆ ಕಣ್ಣೀರು ಬರುತ್ತದೆ.
ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೆ ಕಣ್ಣೀರು ಹಾಕುತ್ತದೆ ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ. ಯಾರು ಹೇಮಾವತಿ, ಹಾರಂಗಿ ಕಟ್ಟಿದ್ದು? ಚನ್ನಪಟ್ಟಣದಲ್ಲಿ ಈಗ ಚರ್ಚೆ ಮಾಡ್ತಾರೆ. ಮಾತಡೋಕೆ ತುಂಬಾ ವಿಚಾರಗಳು ಇವೆ ಎಂದು ವಾಗ್ದಾಳಿ ನಡೆಸಿದರು.