ಬಾಗಲಕೋಟೆ: ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಹೋರಾಟಗಾರರ ಮೇಲೆ ಎಂದೂ ಬಲಪ್ರಯೋಗ ಮಾಡಿಲ್ಲ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
Chanakya Niti: ಅಪ್ಪಿ ತಪ್ಪಿಯೂ ಯಾರ ಮುಂದೆ ಹೇಳಬಾರದ ವಿಷಯಗಳು ಯಾವುವು ಗೊತ್ತಾ..?
ತಕ್ಷಣ ಸಿಎಂ ಸಿದ್ದರಾಮಯ್ಯ ಹೋರಾಟಗಾರರ ಮೀಸಲಾತಿ ಹೋರಾಟಕ್ಕೆ ಉತ್ತರ ನೀಡಬೇಕೆಂದು ಆಗ್ರಹ ಮಾಡಿದರು. ಪಂಚಮಸಾಲಿ ಸಮಾಜ ಬಾಂದವರು ಕೃಷಿ ಕುಟುಂಬದಿಂದ ಬಂದ ರೈತರು. ರೈತರೇ ದೇಶಕ್ಕೆಅನ್ನ ಹಾಕುವಂತವರು. ಅಂತವರ ಮೇಲೆ ಪೊಲೀಸರು ಲಾಠಿ ಪ್ರ ಹಾರ ಮಾಡಿದ್ದರಿಂದ ಅವರ ಸಹನೆ ಕಟ್ಟೆ ಒಡೆದಿದೆ. ಬರುವಂತ ದಿವ ಸದಲ್ಲಿ ಸಮಾಜದ ಜನ ಬಡ್ಡಿ ಸಮೇತ ಇದಕ್ಕೆ ಉತ್ತರ ಕೊಡುತ್ತಾರೆ. ಇದಕ್ಕಿಂತ ಮುಂದೆ ಇದಕ್ಕಿಂತ ಉಗ್ರ ಹೋರಾಟ ನಡೆಸುತ್ತೇವೆ ಎಂದರು.