ವಿಜಯಪುರ: ಬಣಜಿಗರು ಸ್ವಾಭಿಮಾನಿಗಳು. ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಅದನ್ನು ಧೈರ್ಯದಿಂದ ಎದುರಿಸುವ ಶಕ್ತಿ ಅವರಿಗಿದೆ. ನನಗೆ ಟಿಕೆಟ್ ತಪ್ಪಿಸಿದ ವೇಳೆ ಇಡೀ ರಾಜ್ಯದಲ್ಲಿನ ನಮ್ಮ ಸಮಾಜದ ಬೆಂಬಲ ನೀಡಿದರು. ಅದನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕಾರಣ ಇಲ್ಲದೆಯೆ ನನಗೆ, ಮಹದೇವಪ್ಪ ಯಾದವಾಡ ಅವರಿಗೆ ಟಿಕೆಟ್ ತಪ್ಪಿಸಿದರು. ನಮ್ಮ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂಬುದನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು.
Curry Leaves: ಕರಿಬೇವಿನ ಎಲೆಗಳು ಅಡುಗೆಗೂ ಸೈ, ಆರೋಗ್ಯಕ್ಕೂ ಸೈ..! ಇದರಿಂದಿವೆ ಅನೇಕ ಪ್ರಯೋಜನ
ಮುಂದಿನ ದಿವಸದಲ್ಲಿ ಸರಿಯಾದ ದಾರಿಯಲ್ಲಿ ಹೋಗಬೇಕು. ಇಲ್ಲದಿದ್ದರೆ ಇದೇ ರೀತಿ ಪೆಟ್ಟು ಬೀಳುತ್ತವೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದರು. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಬಣಜಿಗ ಸಮಾಜಕ್ಕೆ ಶಿಕ್ಷಣದಲ್ಲಿ ೨ಎ ಮೀಸಲಾತಿ ನೀಡಿದೆ. ನನಗೆ ಕೊಟ್ಟ ಅಧಿಕಾರದಲ್ಲಿ ಸಮಾಜದ ಮತ್ತು ನಾಡಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ತೃಪ್ತಿ ತಂದಿದೆ ಎಂದರು.