ನವದೆಹಲಿ:– ಕರ್ನಾಟಕದ ನಾಲ್ವರು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ವೇಳೆ ಕರ್ನಾಟಕದ ಸಂಸದರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
Pralhad Joshi: ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್ ಜೋಶಿ..!
ಕರ್ನಾಟಕದಿಂದ ಎಚ್ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇದರಲ್ಲಿ ಪ್ರಮುಖವಾಗಿ ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರಿಗೆ ಮಣೆ ಹಾಕಲಾಗಿದೆ.
ವಿಶೇಷ ಎಂದರೆ ಸೋಮಣ್ಣ ಅವರದ್ದು ಅಚ್ಚರಿಯ ಆಯ್ಕೆ. ಉಳಿದ ನಾಲ್ವರ ನಾಲ್ವರ ಹೆಸರು ಮೊದಲೇ ಚಾಲ್ತಿಯಲ್ಲಿದ್ದರೂ ಸೋಮಣ್ಣ ಅವರ ಬಗ್ಗೆ ಹೆಚ್ಚು ಚರ್ಚೆ ನಡೆದಿರಲಿಲ್ಲ. ಇದೀಗ ಅವರು ಅಚ್ಚರಿ ಎಂಬಂತೆ ಆಯ್ಕೆಯಾಗಿದ್ದಾರೆ. ವಿ. ಸೋಮಣ್ಣ ಅವರು ಈ ಹಿಂದೆ ಗೋವಿಂದ ರಾಜ ನಗರ ಕ್ಷೇತ್ರದ ಶಾಸಕರಾಗಿದ್ದರು. ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರ ಸೂಚನೆ ಮೇರೆಗೆ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ತಮ್ಮನ್ನು ಅತಂತ್ರಗೊಳಿಸಿದ ವಿಚಾರದಲ್ಲಿ ಅವರು ಸಿಟ್ಟಾಗಿದ್ದು, ಬಿಜೆಪಿ ಬಿಡುವ ಬಗ್ಗೆ ಮಾತನಾಡಿದ್ದರು.
ಹೌದು….ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿ ಸೋಮಣ್ಣ ಅವರನ್ನು ಸ್ವಕ್ಷೇತ್ರ ಗೋವಿಂದರಾಜನಗರ ಬಿಟ್ಟು ಚಾಮರಾನಗರ ಹಾಗೂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗಿತ್ತು. ಖುದ್ದು ಹೈಕಮಾಂಡ್ ನಾಯಕರೇ ಸೋಮಣ್ಣ ಅವರನ್ನು ಈ ರೀತಿ ಪ್ರಯೋಗ ಮಾಡಿದ್ದರು. ಆದ್ರೆ, ಹೈಕಮಾಂಡ್ ಪ್ರಯೋಗ ಫಲ ನೀಡಿಲ್ಲ. ಸೋಮಣ್ಣ ಸ್ಪರ್ಧೆ ಮಾಡಿದ್ದ ಎರಡೂ ಕ್ಷೇತ್ರಗಳಲ್ಲೂ ಸೋಮಣ್ಣ ಸೋತು ಸುಣ್ಣವಾಗಿದ್ದರು. ಬಳಿಕ ಸೋಮಣ್ಣ ಹೈಕಮಾಂಡ್ ಹಾಗೂ ಕೆಲ ರಾಜ್ಯ ನಾಯಕರ ನಡೆಗೆ ಬೇಸತ್ತು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೀಗ ಹೈಕಮಾಂಡ್, ಸೋಮಣ್ಣ ಅವರ ಕೈಹಿಡಿದೆ.