ಬೆಂಗಳೂರು: ಮತ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರಕಾರ ಮತ್ತು ಸಾರಿಗೆ ಇಲಾಖೆಗೆ ಸೂಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಅವಕಾಶ ಹಾಗೂ ಅಧಿಕಾರವಿಲ್ಲಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿಈಶಾನ್ಯ ಪದವೀಧರ ಕ್ಷೇತ್ರದಲ್ಲಿಮತದಾನ ಮಾಡಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಮತ್ತು
ಮತಗಟ್ಟೆಗಳನ್ನು 160 ರಿಂದ 250ಕ್ಕೆ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಯ್ಯದ್ ಖಲೀಲ್ವುಲ್ಲಾ ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿ ಪರಿಶೀಲಿಸಿದ ನ್ಯಾಯ-ಮೂರ್ತಿಗಳು, ”ಮತದಾನಕ್ಕಾಗಿ ಮತ ಕೇಂದ್ರಗಳಿಗೆ ತೆರಳಲು ಮತದಾರರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಚುನಾವಣೆಗೆ ಆಯೋಗಕ್ಕೆ ಎಲ್ಲಿದೆ ಅವಕಾಶ?,” ಎಂದು ಪ್ರಶ್ನಿಸಿದರು.
”ಒಂದೊಮ್ಮೆ ಸರಕಾರ ಉಚಿತ ಬಸ್ ವ್ಯವಸ್ಥೆ ಮಾಡಿದರೆ ಆಡಳಿತಾರೂಢ ಪಕ್ಷ ಅಕಾರ ದುರ್ಬಳಕೆ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುವುದಿಲ್ಲವೇ?” ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದರು. ”ಉಚಿತ ಬಸ್ ವ್ಯವಸ್ಥೆ ಮಾಡಲು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ನೀವು (ಅರ್ಜಿದಾರರು) ಕೋರಿದ್ದೀರಿ.
ಅಂತಹ ವ್ಯವಸ್ಥೆ ಮಾಡಲು ಕಾನೂನಿನಲ್ಲಿಚುನಾವಣಾ ಆಯೋಗಕ್ಕೆ ಅವಕಾಶವಿದೆಯೇ ಎಂಬುದನ್ನು ಮೊದಲು ಪರಿಶೀಲನೆ ನಡೆಸುವುದು ನಿಮ್ಮ ಜವಾಬ್ದಾರಿ. ಪರಿಶೀಲನೆ ಮಾಡದೆ ಏಕಾಏಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹೇಗೆ? ಅರ್ಜಿಯಲ್ಲಿಸಾರ್ವಜನಿಕ ಹಿತಾಸಕ್ತಿ ವಿಚಾರ ಇರಬಹುದು. ಆದರೆ, ಆ ವಿಚಾರ ಕುರಿತ ಕಾನೂನುಗಳ ಬಗ್ಗೆ ಸಮಗ್ರವಾಗಿ ಅರ್ಜಿದಾರರು ತಿಳಿಯಬೇಕು,” ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದರು.