ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನಡೆಯುತ್ತಿದೆ. ಇಲ್ಲಿಯವರೆಗೆ ಉಭಯ ತಂಡಗಳ ನಡುವೆ ಮೂರು ಪಂದ್ಯಗಳು ನಡೆದಿದ್ದು, ಎರಡೂ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಒಂದು ಪಂದ್ಯ ಡ್ರಾಗೊಂಡಿದೆ. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಯಾವಾಗ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಡಿಸೆಂಬರ್ 26, 2024 ರಂದು ಪ್ರಾರಂಭವಾಗಿ ಡಿಸೆಂಬರ್ 30 ರಂದು ಕೊನೆಗೊಳ್ಳಲಿದೆ.
ನಾಲ್ಕನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ನಾಲ್ಕನೇ ಟೆಸ್ಟ್ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಭಾರತದಲ್ಲಿ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಭಾರತ vs ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಬೆಳಿಗ್ಗೆ 5.00 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ 4.30 ಕ್ಕೆ ನಡೆಯಲಿದೆ.
ನಾಲ್ಕನೇ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ವೀಕ್ಷಿಸಬಹುದಾಗಿದೆ.
ನಾಲ್ಕನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್ಸ್ಟಾರ್ ಅಧಿಕೃತ ಅಪ್ಲಿಕೇಶನ್ ಅಥವಾ ವೆಬ್ಸೈಟ್ನಲ್ಲಿ ಲೈವ್ ಆಗಿ ಲಭ್ಯವಿರುತ್ತದೆ.
ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.
ಆಸ್ಟ್ರೇಲಿಯಾ : ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ (ಉಪನಾಯಕ), ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್ಸ್ಟರ್.