ಬೆಂಗಳೂರು: ರಾಜಕಾರಣದಲ್ಲಿ ಯಾರು ಮಿತ್ರರಲ್ಲ ಶತೃಗಳಲ್ಲ ಎಲ್ಲರು ಸಮಾನರು ಜನ ಸೇವೆಗೆ ಯಾರು ತಮ್ಮ ಜೀವನ ಮುಡುಪಾಗಿಟ್ಟಿರುತ್ತಾರೋ ಅವರೇ ನಿಜವಾದ ಜನ ಸೇವಕರು ಹಾಗೆ ನಿಜವಾದ ರಾಜಕಾರಣಿಗಳು. ಹಾಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ ಅವರು ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಶುಭ ಹಾರೈಸಿದ್ದಾರೆ.
ಶೇಷಾದ್ರಿಪುರಂ ಗುಂಡೂರಾವ್ ಕ್ರೀಡಾಂಗಣದಲ್ಲಿ ಪಶ್ಚಿಮ ವಲಯದ ಮಲ್ಲೇಶ್ವರಂ, ಗಾಂಧಿನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳನ್ನ ಒಟ್ಟುಗೂಡಿಸಿಕೊಂಡು ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶ್ವಥ್ ನಾರಾಯಣ್ ಅವರು ವೇದಿಕೆ ಮೇಲೆಯೇ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಅಂತಾ ಆಶಿಸಿದರು.
ಜನರನ್ನ ನೇರವಾಗಿ ತಲುಪುವ ಕೆಲಸವನ್ನು ಡಿಕೆ ಶಿವಕುಮಾರ್ ಅವರು ಮಾಡುತ್ತಿದ್ದಾರೆ. ಅವರಿಗೆ ಈಗ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತಾ ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಹೋಗಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಶುಭ ಹಾರೈಸಿದರು.
ಕರ್ನಾಟಕ ಸರ್ಕಾರ ಉತ್ತಮವಾದ ಕಾರ್ಯಕ್ರಮ ರೂಪಿಸಿದೆ. ನಮ್ಮ ಪಶ್ಚಿಮ ವಲಯದಲ್ಲಿ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ರೂಪಿಸಿದ್ದಾರೆ. ಜನರ ಕುಂದುಕೊರತೆಗಳನ್ನ ಆಲಿಸುತ್ತಾ ಇದ್ದಾರೆ ಅವರಿಗೆ ಹೃತ್ಪೂರ್ವಕವಾದ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.