ಬೆಂಗಳೂರು: ಓಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರಾತ್ರಿ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ನಮ್ಮ ಮೆಟ್ರೊ ಪ್ರಯಾಣಿಕರಿಗೆ ಮಹತ್ವದ ಸೂಚನೆ ನೀಡಿದೆ. ರಾತ್ರಿ ಕರ್ಫ್ಯೂ ಇರುವುದರಿಂದ ಜ.28 ರಿಂದ ರಾತ್ರಿ 10 ಗಂಟೆ ನಂತರ ಕಡಿಮೆ ರೈಲುಗಳು ಸಂಚರಿಸಲಿದ್ದು, ಸಂಪೂರ್ಣವಾಗಿ ಸೇವೆ ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದೆ. ಅಲ್ಲದೇ ಈಗಿರುವ ಮೆಟ್ರೊದ ಪ್ರತಿದಿನದ ಆರಂಭ ಹಾಗೂ ಮುಕ್ತಾಯದ ಕಾರ್ಯಾಚರಣೆಯ ಸಮಯದಲ್ಲಿ ಬದಲಾವಣೆ ಆಗುವುದಿಲ್ಲ ಎಂದು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

