‘ಬಿಗ್ ಬಾಸ್ ಸೀಸನ್ 10′ (Bigg Boss Kannada 10) ರಿಯಾಲಿಟಿ ಶೋ ಮುಗಿಯಲು ದಿನಗಣನೆ ಶುರುವಾಗಿದೆ. ಸ್ಪರ್ಧಿಗಳೆಲ್ಲರೂ ಎಲಿಮಿನೇಟ್ ಆಗಿ ಈಗ 6 ಸ್ಪರ್ಧಿಗಳು ಫಿನಾಲೆ ವೇದಿಕೆಗೆ ತಲುಪಿದ್ದಾರೆ. ಇವರಲ್ಲಿ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಎಂಬುದಕ್ಕೆ ಸದ್ಯದಲ್ಲೇ ಉತ್ತರ ಸಿಗಲಿದೆ.
ಫಿನಾಲೆ ದಿನ ಅಂತಿಮವಾಗಿ ಇಬ್ಬರು ಸ್ಪರ್ಧಿಗಳು ಸುದೀಪ್ ಜೊತೆ ಇರಲಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ. ಇದೀಗ ಅಂತಿಮವಾಗಿ ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ (Drone Prathap), ವಿನಯ್, ಕಾರ್ತಿಕ್, ತುಕಾಲಿ ಸಂತೂ, ವರ್ತೂರು ಸಂತೋಷ್ (Varthur Santhosh) ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ.
ಈ ಹಿಂದಿನ ಸೀಸನ್ನಲ್ಲಿ ಹಿರಿಯ ನಟಿ ಶೃತಿ ವಿನ್ನರ್ ಆಗಿದ್ದರು. ಈ ಸೀಸನ್ನಲ್ಲಿ ಮಹಿಳಾ ಸ್ಪರ್ಧಿ ಸಂಗೀತಾ ಶೃಂಗೇರಿ (Sangeetha Sringeri) ಹೆಸರು ಹೆಚ್ಚಾಗಿ ಕೇಳಿ ಬರುತ್ತಿದೆ. ಅವರೇ ವಿನ್ನರ್ ಆಗುವ ಸಾಧ್ಯತೆಯಿದೆ ಎಂದು ಅಭಿಮಾನಿಗಳು ಲೆಕ್ಕಾಚಾರವಾಗಿದೆ. ಉಳಿದುಕೊಂಡಿರುವ ಪ್ರತಿ ಸ್ಪರ್ಧಿಗಳು ಕೂಡ ಟಫ್ ಫೈಟ್ ಕೊಡುತ್ತಿದ್ದಾರೆ.