ತವರು ಅಂಗಳದಲ್ಲಿ ನಡೆಯಲಿರುವ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಲು ಬಿಸಿಸಿಐ ಆಯ್ಕೆದಾರರು ಬಲಿಷ್ಠ 15 ಸದಸ್ಯರ ತಂಡವನ್ನು ಕಟ್ಟಿದ್ದು, ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯರಂತಹ ಆಟಗಾರರು ಟ್ರೋಫಿ ಗೆದ್ದುಕೊಡುವ ಸಾಮರ್ಥ್ಯ ಹೊಂದಿದ್ದಾರೆ.
ಟೀಮ್ ಇಂಡಿಯಾದಂತೆ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಎಲ್ಲಾ 10 ತಂಡಗಳು ತನ್ನ ಬಲಿಷ್ಠ 15 ಸದಸ್ಯರ ಹೆಸರನ್ನು ಪ್ರಕಟಿಸಿದ್ದು, 48 ಪಂದ್ಯಗಳ ಅಂತ್ಯಕ್ಕೆ ಚಾಂಪಿಯನ್ ಪಟ್ಟ ಅಲಂಕರಿಸಲು ಪ್ರಬಲ ಪೈಪೋಟಿ ನೀಡಲು ಸಜ್ಜಾಗಿವೆ. ಆದರೆ ಟೀಮ್ ಇಂಡಿಯಾದ ಪರ ಬೆಂಚ್ ಕಾಯಬಲ್ಲ ಮೂವರು ಆಟಗಾರರ ವಿವರ ಇಲ್ಲಿದೆ.

1. ರವಿಚಂದ್ರನ್ ಅಶ್ವಿನ್
ವಿಶ್ವಕಪ್ ಟೂರ್ನಿಗೆ ಪ್ರಕಟಿಸಿದ್ದ ಟೀಮ್ ಇಂಡಿಯಾದ ಪ್ರಮುಖ ತಂಡದಲ್ಲಿ ಸ್ಥಾನ ಪಡೆಯದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಗಾಯಾಳು ಅಕ್ಷರ್ ಪಟೇಲ್ ಬದಲಿ ಆಟಗಾರರಾಗಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧ ಒಡಿಐ ಸರಣಿಯಲ್ಲಿ 4 ವಿಕೆಟ್ ಪಡೆದು ಗಮನ ಸೆಳೆದಿದ್ದರು.
2. ಇಶಾನ್ ಕಿಶನ್
ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್, ಬ್ಯಾಟರ್ ಇಶಾನ್ ಕಿಶನ್ ಕೂಡ ಬಹುತೇಕ ಪಂದ್ಯಗಳಲ್ಲಿ ಬೆಂಚ್ ಕಾಯುವ ಸಾಧ್ಯತೆಗಳಿವೆ. ತಂಡದಲ್ಲಿ ಅನುಭವಿ ಕೆ ಎಲ್ ರಾಹುಲ್ ಮೊದಲ ಆದ್ಯತೆಯ ವಿಕೆಟ್ ಕೀಪರ್-ಬ್ಯಾಟರ್ ಆಗಿ ಆಡುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಆಕರ್ಷಕ ಶತಕ ಸಿಡಿಸಿ ಕಮ್ಬ್ಯಾಕ್ ಮಾಡಿದ್ದಾರೆ.
3. ಸೂರ್ಯಕುಮಾರ್ ಯಾದವ್
ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಟಿ20 ನಂ. 1 ಬ್ಯಾಟರ್ ಸೂರ್ಯಕುಮಾರ್ ಯಾದವ್ಗೆ ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾದ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಅವರು ಪ್ರಬಲ ಪೈಪೋಟಿ ನೀಡಲಿದ್ದಾರೆ

