ಬೆಂಗಳೂರು: ಮಗುವಿನ ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ರವಾನೆ ಮಾಡುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಅವರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಚನಾ ಸೇಥ್ ಅವರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್-ಅಪ್ ಮೈಂಡ್ಫುಲ್ ಎಐ ಲ್ಯಾಬ್ನ ಸಿಇಒ ಆಗಿದ್ದು, ಇದು “AI ನೀತಿಶಾಸ್ತ್ರದಲ್ಲಿ ಆಳವಾದ ಪರಿಣತಿಯನ್ನು ಹೊಂದಿದೆ ಮತ್ತು ಯಂತ್ರ ಕಲಿಕೆ ವ್ಯವಸ್ಥೆಗಳ ಮೂಲಮಾದರಿ, ನಿಯೋಜನೆ ಮತ್ತು ಸ್ಕೇಲಿಂಗ್ನಲ್ಲಿ ಕೈಗಳನ್ನು ಹೊಂದಿದೆ.”
ಅವರು ಸಹಜ ಭಾಷಾ ಸಂಸ್ಕರಣೆಯಲ್ಲಿ ಪೇಟೆಂಟ್ಗಳನ್ನು ಸಹ ಹೊಂದಿದ್ದಾರೆ.
ಸುಚನಾ ಸೇಠ್ ಪಶ್ಚಿಮ ಬಂಗಾಳದವರು ಮತ್ತು ಅವರ ಪತಿ ಕೇರಳದವರು.
ಸುಚನಾ ಪತಿಯು ಮಗನನ್ನು ಭೇಟಿಯಾದರೆ, ಅವರು ಮಗುವನ್ನು ತಮ್ಮ ಬಳಿಯೇ ಇರಿಸಿಕೊಳ್ಳಲು ಪ್ರಯತ್ನಿಸುತ್ತಾರೆ ಎಂದು ಸುಚನಾ ನಾಲ್ಕು ವರ್ಷದ ಮಗುವನ್ನು ಕೊಲೆಮಾಡಿದ್ದಾರೆ. ಸುಚನಾ 2010ರಲ್ಲಿ ವಿವಾಹವಾಗಿದ್ದಾರೆ. 2019 ರಲ್ಲಿ ದಂಪತಿಗೆ ಮಗು ಜನಸಿದೆ. ಆದರೆ 2020ರಲ್ಲಿ ದಂಪತಿ ವಿಚ್ಛೇದನಕ್ಕೆ ಅರ್ಜಿಸಲ್ಲಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಿಚ್ಛೇದನ ನೀಡಿದೆ.
ಆದರೆ ಪ್ರತಿಭಾನುವಾರದಂದು ತನ್ನ ಮಗುವನ್ನು ಭೇಟಿಯಾಗಲು ತಂದೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೆ ಸುಚನಾಗೆ ಮಗುವನ್ನು ಪತಿಗೆ ಭೇಟಿ ಮಾಡಿಸುವ ಇಷ್ಟವಿರಲಿಲ್ಲ. ಹೀಗಾಗಿ ಪತಿ ಮಗುವನ್ನು ಭೇಟಿಯಾಗುವ ಒಂದು ದಿನ ಮುಂಚೆಯೇ ಸುಚನಾ ಕೊಲೆ ಮಾಡಿದ್ದಾರೆ.
ಆಕೆ ಹೋಟೆಲ್ನಿಂದ (Hotel) ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್ಗೆ ಹೈವೆಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾರೆ.
ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದಾನೆ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್ಕೇಸ್ನಲ್ಲಿ ಮಗುವಿನ ಶವಪತ್ತೆಯಾಗಿದೆ. ಸದ್ಯ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಸುಚನಾಳನ್ನ ಗೋವಾ ಪೊಲೀಸರಿಗೆ ಒಪ್ಪಿಸಿರುವುದಾಗಿ ಐಮಂಗಲ ಪೊಲೀಸರು ತಿಳಿಸಿದ್ದಾರೆ.