ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂಬಂಧ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಭೆ ನಡೆಯಲಿದೆ. ಸಭೆಯಲ್ಲಿ ಮೇಕೆದಾಟು ಪಾದಯಾತ್ರೆ ಬೆಂಗಳೂರಿಗೆ ಪ್ರವೇಶ ಮಾಡಿದ ನಂತರ ಸಾಗಬೇಕಾದ ಮಾರ್ಗ, ಮಾಡಬೇಕಾದ ವ್ಯವಸ್ಥೆ, ಕಾರ್ಯಕರ್ತರ ಸಂಘಟನೆ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇನ್ನೂ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
