ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಆಂತರಿಕ ಉತ್ಪಾದನೆಯನ್ನು ಉತ್ತೇಜಿಸಲು ಭಾರತವು ತನ್ನ ನೀತಿಗಳ ಮೂಲಕ ಮಾದರಿಯಾಗಿದೆ ಎಂದು ಹೇಳಿದ್ದಾರೆ. ರಷ್ಯಾ ನಿರ್ಮಿತ ಕಾರುಗಳ ಕುರಿತು 8ನೇ ಪೂರ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಅಧ್ಯಕ್ಷ ಪುಟಿನ್,
ರಷ್ಯಾ ತನ್ನ ಪಾಲುದಾರನಾದ ಭಾರತವನ್ನು ಅನುಕರಿಸುವ ಅಗತ್ಯವಿದೆ ಎಂದು ಹೇಳಿದರು. ಉತ್ಪಾದನೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿಯವರ ಮೇಕ್-ಇನ್-ಇಂಡಿಯಾ ಉಪಕ್ರಮದ ಉದಾಹರಣೆಯನ್ನು ಉಲ್ಲೇಖಿಸಿದರು. ‘ ಆಗ ನಮ್ಮಲ್ಲಿ ಸ್ವದೇಶಿ ನಿರ್ಮಿತ ಕಾರುಗಳು ಇರಲಿಲ್ಲ ಎಂಬುದು ನಿಮಗೆ ತಿಳಿದಿದೆ ಆದರೆ ಈಗ ನಮ್ಮ ಬಳಿ ಇದೆ. 1990 ರ ದಶಕದಲ್ಲಿ ನಾವು ಅಪಾರ ಪ್ರಮಾಣದಲ್ಲಿ ಖರೀದಿಸಿದ ಮರ್ಸಿಡಿಸ್ ಮತ್ತು ಆಡಿ ಕಾರುಗಳಿಗೆ ಹೋಲಿಸಿದರೆ ಅವು ಸಾಧಾರಣವಾಗಿ ಕಾಣುತ್ತವೆ ಎಂಬುದು ನಿಜ.

ಖ್ಯಾತ ನಟ ಕಮಲ್ ಹಾಸನ್ ಮಾಜಿ ಪ್ರೇಯಸಿ, ನಟಿ ಗೌತಮಿಗೆ ಮೋಸ: ನ್ಯಾಯ ಕೊಡಿಸಿ ಎಂದು ಅಳಲು!
ಆದರೆ ಇದು ಸಮಸ್ಯೆಯಲ್ಲ. ನಮ್ಮ ಕೆಲವು ಪಾಲುದಾರರನ್ನು ನಾವು ಅನುಕರಿಸಬೇಕು ಎಂದು ನಾನು ಭಾವಿಸುತ್ತೇನೆ. ಉದಾಹರಣೆಗೆ ಭಾರತ. ಅವರು ಭಾರತ ನಿರ್ಮಿತ ವಾಹನಗಳ ತಯಾರಿಕೆ ಮತ್ತು ಬಳಕೆಯ ಮೇಲೆ ಕೇಂದ್ರೀಕರಿಸಿದ್ದಾರೆ. ಮೇಕ್-ಇನ್-ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವ ಮೂಲಕ ಪ್ರಧಾನಿ ಮೋದಿ ಸರಿಯಾದ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ’ ಎಂದು ಪುಟಿನ್ ಹೇಳಿದರು.
