ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ ಅವರು ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಹಿರಿಯ ಬಿಜೆಪಿ ನಾಯಕರೆಲ್ಲರೂ ಉಪಸ್ಥಿತರಿದ್ದು ಎಸ್.ಟಿ .ಸೋಮಶೇಖರ್ ಮಾತ್ರ ಗೈರಾಗಿದ್ದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಪ್ಲ್ಯಾನ್ ಆಗಿತ್ತು. ನನ್ನ ಕ್ಷೇತ್ರದ್ದೇ ಕಾರ್ಯಕ್ರಮ ಇದ್ದಿದ್ದರಿಂದ ನನಗೆ ಹೋಗಲು ಆಗಲಿಲ್ಲ. ನಮ್ಮ ಕ್ಷೇತ್ರಕ್ಕೆ ಇಂದು ಗೃಹ ಸಚಿವರು ಬರುತ್ತಿದ್ದಾರೆ. ಸಚಿವರ ಕಾರ್ಯಕ್ರಮ ಮುಗಿದ ಬಳಿಕ ನಾನು ಪಕ್ಷದ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಸಷ್ಟಪಡಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)