ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ?: ಸಿಎಂಗೆ HDK ಕಿಡಿ

ಬೆಂಗಳೂರು: ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಆಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು; ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದಿದ್ದಾರೆ ಅಲ್ಲದೆ, ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ?: ಸಿಎಂಗೆ HDK ಕಿಡಿ