ಬೆಂಗಳೂರು:- ಪ್ರಧಾನಿ ತವರು ರಾಜ್ಯ ಗುಜರಾತ್ ಮತ್ತು ದೇಶದಲ್ಲಿ ಏಕೆ ಅಪೌಷ್ಟಿಕತೆ ಹೆಚ್ಚುತ್ತಿದೆ ಎಂಬುದಕ್ಕೆ ಅವರೇ ಉತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ಮಾದರಿ ಎಂದು ಹೊಗಳುವವರು ಪ್ರಧಾನಿ ತವರು ರಾಜ್ಯದಲ್ಲಿ ಅಪೌಷ್ಟಿಕತೆ ಸೂಚ್ಯಂಕ ಏಕೆ ಹೆಚ್ಚುತ್ತಿದೆ ಎಂಬುದನ್ನು ತಿಳಿಸಬೇಕು ಮತ್ತು “ಇದು ಇಡೀ ದೇಶಕ್ಕೆ ಮಾದರಿಯಾಗಬಹುದೇ?” ಎಂದು ಸಿಎಂ ಪ್ರಶ್ನಿಸಿದರು.
ಬಡತನ ಮತ್ತು ಅನಕ್ಷರತೆ ನಿರ್ಮೂಲನೆಯಾಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ ಎಂದರು. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಮತ್ತು ಅದಕ್ಕೆ ಬೇಕಾದ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು