ಕಲ್ಬುರ್ಗಿ:- ಡಾ. ಬಿ ಆರ್ ಅಂಬೇಡ್ಕರ್ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂಬ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕಲ್ಬುರ್ಗಿ ಬಂದ್ ಗೆ ಕರೆ ಕೊಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ಬಂದ್ ಹಿನ್ನೆಲೆ ಇಂದು ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.
ಅಂಬೇಡ್ಕರ್ ವಿರುದ್ದದ ಅಮಿತ್ ಶಾ ಹೇಳಿಕೆ ಖಂಡಿಸಿ ನಿನ್ನೆಯೂ ಕೂಡ ಜಿಲ್ಲೆಯ ಆಳಂದ ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ರಸ್ತೆ, ಅಂಗಡಿ, ಮುಂಗಟ್ಟು ಬಂದ್ ಮಾಡಿ, ರಸ್ತೆ ಮೇಲೆ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಅಮಿತ್ ಶಾ ಅವರನ್ನು ಸಂಪುಟದಿಂದ ತೆಗೆದು ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.