ಕಾರವಾರ:- ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕೈ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ 2023ರ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಹಲವು ಸಭೆಗಳನ್ನೂ ನಡೆಸಿದ್ದ ಹೆಬ್ಬಾರ್, ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಸೈಲೆಂಟ್ ಆಗಿದ್ದರು
ಅಲ್ಲದೇ ಆಗಾಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ, ಕೈ ನಾಯಕರನ್ನ ಹಾಡಿ ಹೊಗುಳುತ್ತಿದ್ದರು. ಸದ್ಯ ಲೋಕಸಭಾ ಚುನಾವಣೆ ಸಮೀಪದಲ್ಲಿದ್ದರೂ ಶಿವರಾಂ ಹೆಬ್ಬಾರ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿಲ್ಲ. ಈ ನಡುವೆ ಅವರ ಪುತ್ರ ಇಂದೇ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ