ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದರು.
Hubballi: ಸಮಾಜದ ಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಮದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ನನ್ನ ಜೊತೆ ಯಾರೂ ಈ ಬಗ್ಗೆ ಚರ್ಚೆ ಮಾಡಿಲ್ಲ. ಅಧ್ಯಕ್ಷರ ಬದಲಾವಣೆ ವಿಚಾರ ಸಿಎಂ, ಡಿಸಿಎಂ, ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
ನಾನು ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಮಾತಾಡಿದ್ದು ಇಲಾಖೆ ಬಗ್ಗೆ, ನಮ್ಮ ಕ್ಷೇತ್ರದ ಬಗ್ಗೆ. ಡಿಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಬಹುದು. ಅವರು ಪಕ್ಷದ ಅಧ್ಯಕ್ಷರು. ಅಂತಿಮವಾಗಿ ಹೈಕಮಾಂಡ್ ಎಲ್ಲವೂ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.