ಬೆಂಗಳೂರು:– ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎಲೆಕ್ಷನ್ ಗದ್ದಲ ಮುಗಿದಿದೆ. ಇದೀಗ ಬಿಜೆಪಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟಕ್ಕಿಳಿಯುವ ಎಲ್ಲಾ ಸಾಧ್ಯತೆಗಳಿವೆ. ಅಲ್ಲದೇ ಈ ಪ್ರಕರಣದಲ್ಲಿ ಸ್ವತಃ ಸಿಬಿಐ ಪ್ರವೇಶ ಮಾಡಿ ತನಿಖೆ ಕೈಗೆತ್ತಿಕೊಂಡಿದ್ದು, ಹಲವರಲ್ಲಿ ತಳಮಳ ಶುರುವಾಗಿದೆ. ಹೀಗಾಗಿ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಮುಂಜಾಗ್ರತಾವಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.
ನಿನ್ನೆ ರಾತ್ರಿ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಮಹತ್ವದ ಚರ್ಚೆ ಮಾಡಿದ್ದು, ಸಿಬಿಐಗೆ ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ರಾಜೀನಾಮೆ ಪಡೆಯುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ನಾಗೇಂದ್ರ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಗಳಿಗೆ