ಪಾಟ್ನ: ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಅವರು ಬಿಜೆಪಿಯ ಬೆಂಬಲದೊಂದಿಗೆ ಭಾನುವಾರ ಒಂಬತ್ತನೇ ಬಾರಿಗೆ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (ಜ.28 ರಂದು) ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ 2 ಡಿಸಿಎಂ ಸ್ಥಾನಗಳನ್ನು ಪಡೆದುಕೊಳ್ಳುತ್ತವೆ ಎನ್ನಲಾಗಿದೆ.
ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್-ಆರ್ಜೆಡಿ ಜೊತೆಗೆ ಇರುವ ಮೈತ್ರಿಕೂಟಕ್ಕೆ ವಿದಾಯ ಹೇಳಿ, ಬಿಜೆಪಿ ಜೊತೆ ಕೈಜೋಡಿಸಲಿದ್ದಾರೆ ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ, ನಿತೀಶ್ ಬಿಜೆಪಿ-ಜೆಡಿಯು ಸರ್ಕಾರದ ಸಿಎಂ ಆಗಲಿದ್ದಾರೆ ಎಂದು ವರದಿಯಾಗಿದೆ
ನಿತೀಶ್ ಕುಮಾರ್ ಅವರು ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದಲ್ಲಿ ಆಗಬಹುದಾದ ಬದಲಾವಣೆಯ ವರದಿಗಳ ನಡುವೆ ಬಿಹಾರದಲ್ಲಿ ಜಿಲ್ಲಾಧಿಕಾರಿಗಳ ದೊಡ್ಡ ಪ್ರಮಾಣದ ವರ್ಗಾವಣೆ ನಡೆಯುತ್ತಿದೆ.
ಈ ಸಮಯದಲ್ಲಿ ಅಸೆಂಬ್ಲಿಯನ್ನು ವಿಸರ್ಜಿಸಲಾಗುವುದಿಲ್ಲ ಮತ್ತು ಮತದಾನವನ್ನು ನಡೆಸಲಾಗುವುದಿಲ್ಲ ಎನ್ನಲಾಗಿದೆ. ಬಿಹಾರದಲ್ಲಿ ಮುಂದಿನ ವರ್ಷ ಮತದಾನ ನಡೆಯಲಿದೆ. ಆದ್ದರಿಂದ ಎರಡೂ ಪಕ್ಷಗಳು ಅವಸರದಲ್ಲಿಲ್ಲ ಎಂಬುದು ಅರ್ಥವಾಗುವಂತಹದ್ದಾಗಿದೆ. ಏಪ್ರಿಲ್/ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೇಲೆ ತಕ್ಷಣದ ಗಮನ ಕೇಂದ್ರೀಕರಿಸಲಾಗಿದೆ.