ಬೆಂಗಳೂರು:-ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪ ಹಿನ್ನೆಲೆಯಲ್ಲಿ ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.
ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪದಡಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಆಗಿದೆ.
ಘಟನೆ ಸಂಬಂಧ ಫಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು ರಾಬಿನ್ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ.
ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯನ್ನು ಕ್ರಿಕೆಟರ್ ರಾಬಿನ್ ಉತ್ತಪ್ಪ ಅವರು ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಉದ್ಯೋಗಿಗಳ ಸಂಬಳದಿಂದ ಪಿಎಫ್ ಹಣವನ್ನು ತಿಂಗಳು ತಿಂಗಳು ಕಡಿತ ಮಾಡಲಾಗುತ್ತಿತ್ತು. ಆದರೆ ಈ ಹಣವನ್ನು ಉದ್ಯೋಗಿಗಳ ಖಾತೆಗೆ ಹಾಕುತ್ತಿರಲಿಲ್ಲ. ಹೀಗೆ ಸುಮಾರು 23 ಲಕ್ಷ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.