ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಹೇಳಿದ್ದಾರೆ. 2025ರ ಏಪ್ರಿಲ್ 7ರಿಂದ ಮೇ 20ರ ವರೆಗೆ ಪಾಕ್ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದ್ದು,
#WATCH | Delhi: On the Champion Trophy to be held in Pakistan next year, BCCI vice-president Rajeev Shukla said, "In the case of the Champion Trophy, we will do whatever the Government of India will tell us to do. We send our team only when the Government of India gives us… pic.twitter.com/TeA3dZ5Twn
— ANI (@ANI) May 6, 2024
ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಪಾಕಿಸ್ತಾನಕ್ಕೆ ಟೀಂ ಇಂಡಿಯಾ ತೆರಳಲಿದೆಯೇ ಅನ್ನೋ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಅನುಮತಿ ನೀಡಿದರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಕಳುಹಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.