ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್ ಪಿಪಿ ಅಧ್ಯಕ್ಷರಾದ ಗಾಲಿ ಜನಾರ್ದನ ರೆಡ್ಡಿಯವರು ಹೇಳಿದ್ದಾರೆ.
ಕೊಪ್ಪಳದಲ್ಲಿ ಈ ವಿಚಾರವಾಗಿ ಮಾತನಾಡಿರುವ ಅವರು, ಶತಮಾನಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ನಾಗರಿಕರ ಕನಸನ್ನು ನನಸು ಮಾಡಿದ್ದಾರೆ.
ಹಾಗಾಗಿ, ಮತ್ತೊಮ್ಮೆ ಮೋದಿಯವರು ಈ ದೇಶದ ಪ್ರಧಾನಿಯಾಗಬೇಕು. ಲೋಕಸಭೆ ಚುನಾವಣೆಯಲ್ಲಿ ಕೆಆರ್ ಪಿಪಿ ಕೂಡ ಸ್ಪರ್ಧಿಸಲಿದೆ. ಅಂದಾಜು ನಾಲ್ಕೈದು ಕ್ಷೇತ್ರಗಳಲ್ಲಿ ನಾವು ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೇನೆ. ನಮ್ಮ ಅಭ್ಯರ್ಥಿಗಳು ಗೆದ್ದ ನಂತರ ನಾವು ಬಿಜೆಪಿಯನ್ನು ಬೆಂಬಲಿಸುತ್ತೇವೆ’’ ಎಂದು ಹೇಳಿದ್ದಾರೆ.