ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಸಂಬಂಧ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರದ ನಿಯಮಗಳನ್ನು ಪಾಲಿಸದೇ ತಮ್ಮ ಮೊಂಡು ಹಠದಿಂದ ಪಾದಯಾತ್ರೆ ನಡೆಸಿ ಕೋವಿಡ್ ಹರಡಲು ಕಾರಣರಾದರು. ಈಗ ಮಾನ್ಯ ಉಚ್ಚ ನ್ಯಾಯಾಲಯದ ಛೀಮಾರಿಗಾದರೂ ಕಾಂಗ್ರೆಸ್ ಪಕ್ಷ ತಲೆ ಬಾಗುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನೂ ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅಡ್ಡಿ ಮಾಡಬಾರದು ಎಂಬುವುದು ಬಿಜೆಪಿ ಸರ್ಕಾರದ ನಿಲುವೇ ಹೊರತು, ದೌರ್ಬಲ್ಯವಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
