ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚ್ತಿದ್ದಾರೆ. ಸದ್ಯ ಬಾಲಿವುಡ್ನ ‘ಅನಿಮಲ್’ (Animal) ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ತಂಡದ ಜೊತೆ ನಟಿ ಬೆಂಗಳೂರಿಗೆ ಬಂದಿದ್ದು, ಸಿನಿಮಾ ಬಗ್ಗೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಮತ್ತೆ ಕನ್ನಡ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಾರಾ? ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಣ್ಬೀರ್ ಕಪೂರ್ (Ranbir Kapoor) & ಟೀಮ್ ಜೊತೆ ಬೆಂಗಳೂರಿಗೆ ಕಾಲಿಟ್ಟಿರುವ ಕೊಡಗಿನ ಕುವರಿ, ಕನ್ನಡದಲ್ಲೇ ಸಿನಿಮಾ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ಮತ್ತೆ ಕನ್ನಡ ಚಿತ್ರದಲ್ಲಿ ನಟಿಸುವ ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಾನು ಪ್ಯಾನ್ ಇಂಡಿಯಾ ಸಿನಿಮಾ ಮಾಡುವಾಗ ಕನ್ನಡದಲ್ಲಿ ಡಬ್ ಮಾಡುವ ಅವಕಾಶ ಸಿಕ್ಕರೆ, ಖಂಡಿತಾ ಮಾಡ್ತೀನಿ. ಇನ್ನೂ ನನಗೆ ಅನಿಸುತ್ತಾ ಇಲ್ಲ, ನಾನು ಕನ್ನಡ ಇಂಡಸ್ಟ್ರಿಯಿಂದ ದೂರ ಇದ್ದೀನಿ ಅಂತ. ಅದರಲ್ಲೂ ಕನ್ನಡದ ಸಿನಿಮಾ ಬಗ್ಗೆ ಇದೀಗ ಮಾತುಕತೆ ನಡೆಯುತ್ತಿದೆ. ಅದರ ಬಗ್ಗೆ ಸದ್ಯದಲ್ಲೇ ಮಾಹಿತಿ ಕೊಡ್ತೀನಿ ಎಂದು ರಶ್ಮಿಕಾ ಮಾತನಾಡಿದ್ದಾರೆ