ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ವಿಂಡೀಸ್ ಆಲ್ರೌಂಡರ್ ಹೊರಗುಳಿದಿದ್ದಾರೆ.
ಟಿ20 ಸರಣಿಗಾಗಿ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋವ್ಮನ್ ಪೊವೆಲ್ ಮುನ್ನಡೆಸಲಿದ್ದಾರೆ. ಇನ್ನು ಈ ಬಳಗದಲ್ಲಿ ಸ್ಟಾರ್ ಆಲ್ರೌಂಡರ್ ಆ್ಯಂಡ್ರೆ ರಸೆಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ 2024ರ ವೆಸ್ಟ್ ಇಂಡೀಸ್ ತಂಡದಲ್ಲಿ ರಸೆಲ್ ಇದ್ದರು. ಆದರೆ ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ವಿಂಡೀಸ್ ಆಲ್ರೌಂಡರ್ ಹೊರಗುಳಿದಿದ್ದಾರೆ.
Kitchen Hacks: ಟೊಮೆಟೊ ತುಂಬಾ ದಿನ ಫ್ರೆಶ್ ಆಗಿರಬೇಕಾ!? ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ!
ಇನ್ನು ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ವೇಳೆ ವಿಶ್ರಾಂತಿ ಪಡೆದಿದ್ದ ಅಲ್ಝಾರಿ ಜೋಸೆಫ್ ಈ ಸರಣಿಗೂ ಅಲಭ್ಯರಾಗಿದ್ದಾರೆ. ಹಾಗೆಯೇ ಗಾಯಗೊಂಡಿರುವ ಆರಂಭಿಕ ಬ್ಯಾಟರ್ ಬ್ರ್ಯಾಂಡನ್ ಕಿಂಗ್ 3 ಪಂದ್ಯಗಳಿಂದ ಹೊರಗುಳಿದಿದ್ದಾರೆ.
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ಅಲಿಕ್ ಅಥಾನಾಝ್, ಜಾನ್ಸನ್ ಚಾರ್ಲ್ಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಫ್ಯಾಬಿಯನ್ ಅಲೆನ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಓಬೆಡ್ ಮೆಕಾಯ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಶೆರ್ಫೇನ್ ರುದರ್ಫೋರ್ಡ್, ರೋಮರ್ ಶೆಫರ್ಡ್.